ಸಿಎಂ ಹುದ್ದೆ ಬಗ್ಗೆ ಸಿ.ಪಿ. ಯೋಗೇಶ್ವರ್ ಮತ್ತೆ ಬಿಗ್ ಬಾಂಬ್

www.rajadhanitimes.in

ಮೈಸೂರು :- ಅಂಬಾರಿ ಹೊರಲು ಯಾವ ಆನೆ ಸೂಕ್ತ ಎನ್ನುವುದು ಮುಖ್ಯ. ರಾಜ್ಯದ ಜನತೆಯ ಸಮಸ್ಯೆಗೆ ಸ್ಪಂದಿಸುವವರು ಮುಖ್ಯಮಂತ್ರಿಯಾಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮತ್ತೆ ಸಚಿವ ಸಿ.ಪಿ. ಯೋಗೇಶ್ವರ್ ಸಿಡಿಗುಂಡು ಸಿಡಿಸಿದ್ದಾರೆ.
ಮೈಸೂರಿನಲ್ಲಿ ಅವರು ಮತ್ತೊಂದು ಬಾಂಬ್ ಸಿಡಿಸಿದ್ದು, ಮುಖ್ಯಮಂತ್ರಿ ಅಂದರೆ ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ಹುದ್ದೆಯಾಗಿದೆ. ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಆಗುವಂತಹುದಲ್ಲ ಎಂದು ಸಿಎಂ, ಸರ್ಕಾರದ ವಿರುದ್ಧ ಮತ್ತೆ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ.
ಮರಿ ಆನೆಗಳಿಗೆ ಅಂಬಾರಿ ಹೊರಿಸಲು ಆಗುವುದಿಲ್ಲ. ಬದಲಾವಣೆ ಜಗದ ನಿಯಮ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Leave a Reply

Your email address will not be published.

error

ನಮ್ಮ ಜತೆಗೆ ಕೈ ಜೋಡಿಸಲು Subscribe ಮಾಡಿ