ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್​ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್​ ಅವರು ರಾಜಭವನದಲ್ಲಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಗೆಹ್ಲೋಟ್​ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನಿರ್ಗಮಿತ ರಾಜ್ಯಪಾಲ ವಿ.ಆರ್ ವಾಲ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ಗೆಹ್ಲೋಟ್​ ಅವಬರು ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಿದರು ನೂತನ ರಾಜ್ಯಪಾಲರು ಕಾರ್ಯಕ್ರಮದ ಬಳಿಕ ಅತಿಥಿಗಳೊಂದಿಗೆ ಉಭಯ ಕುಶಲೋಪರಿ ನಡೆಸಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಕೆಲವು ಸಚಿವರಷ್ಟೇ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error

ನಮ್ಮ ಜತೆಗೆ ಕೈ ಜೋಡಿಸಲು Subscribe ಮಾಡಿ