ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಂದ ವಿವಿಧ ರಸ್ತೆ ಕಾಮಗಾರಿಗಳ ಪರಿವೀಕ್ಷಣೆ :

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೈಗೊಂಡಿರುವ ವೈಟ್ ಟಾಪಿಂಗ್, ಟೆಂಡರ್ ಶ್ಯೂರ್ ಹಾಗೂ ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಪರಿವೀಕ್ಷಣೆ ನಡೆಸಿದರು.
ಈ ವೇಳೆ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರುಗಳಾದ ಆರ್.ಅಶೋಕ್, ಕೆ.ಗೋಪಾಲಯ್ಯ, ಭೈರತಿ ಬಸವರಾಜು, ವಿ.ಸೋಮಣ್ಣ, ಅರವಿಂದ ಲಿಂಬಾವಳಿ, ಶಾಸಕರುಗಳಾದ ರಿಜ್ವಾನ್ ಹರ್ಷದ್, ರಘು, ಎನ್.ಎ.ಹ್ಯಾರೀಸ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮ, ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ

ಆಯುಕ್ತರುಗಳಾದ ರಂದೀಪ್, ದಯಾನಂದ್, ಮನೋಜ್ ಜೈನ್, ರೆಡ್ಡಿ ಶಂಕರ ಬಾಬು, ಡಾ. ಹರೀಶ್ ಕುಮಾರ್, ರವೀಂದ್ರ, ಶ್ರೀಮತಿ ತುಳಸಿ ಮದ್ದಿನೇನಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ರಾಜೇಂದ್ರ ಚೋಳನ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.