ನಾಗರಬಾವಿ ನಮ್ಮೂರ ತಿಂಡಿ ಹೋಟೆಲ್ ಬಂದ್ :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ವಲಯದ ಜ್ಞಾನಭಾರತಿ ವಾರ್ಡ್ ನ ನಾಗರಭಾವಿ ಮುಖ್ಯರಸ್ತೆಯ ಎನ್.ಜಿ.ಎಫ್ ಬಡಾವಣೆಯಲ್ಲಿರುವ ನಮ್ಮೂರ ತಿಂಡಿ ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಕೋವಿಡ್-19 ಪರೀಕ್ಷೆ ನಡೆಸಿದಾಗ ಒಬ್ಬ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿರುತ್ತದೆ. ಈ ಸಂಬಂಧ ಅವರನ್ನು ಸೂಕ್ತ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಯಿಸಲಾಗಿದ್ದು, ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಕೋವಿಡ್-19 ಪರೀಕ್ಷೆ ನಡೆಸಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿರುತ್ತದೆ.

ಸದರಿ ಹೋಟೆಲ್‌ನಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡಲಾಗಿದ್ದು, ಹೋಟೆಲ್‌ನ್ನು ಮುಚ್ಚಲಾಗಿರುತ್ತದೆ. ಉಳಿದ ಸಿಬ್ಬಂದಿಗಳ ಕೋವಿಡ್-19 ಪರೀಕ್ಷೆಯ ಫಲಿತಾಂಶ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು. ಅಲ್ಲದೆ ರಾಜರಾಜೇಶ್ವರಿನಗರ ವಲಯದಲ್ಲಿರುವ ಎಲ್ಲಾ ಹೋಟೆಲ್ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಿಸುವಂತೆ ಮತ್ತು ಕೋವಿಡ್-19 ಲಸಿಕೆ ಹಾಕಿಸುವಂತೆ ವಲಯ ಆಯುಕ್ತರು ಶ್ರೀ ರೆಡ್ಡಿ ಶಂಕರ ಬಾಬು ರವರು ಹೋಟೆಲ್ ಮಾಲೀಕರಲ್ಲಿ ಈ ಮೂಲಕ ಮನವಿ ಮಾಡಿರುತ್ತಾರೆ.

Leave a Reply

Your email address will not be published.

error

ನಮ್ಮ ಜತೆಗೆ ಕೈ ಜೋಡಿಸಲು Subscribe ಮಾಡಿ