ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲುಸೇತುವೆಯ ಟೌನ್ ಹಾಲ್ ದಿಕ್ಕಿನ ಇಳಿಜಾರು(Down Ramp) ನ ಎಸ್.ಜೆ.ಪಿ ರಸ್ತೆಯ ಜಂಕ್ಷನ್ ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಾಳೆಯಿಂದ :

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದ ಎನ್.ಆರ್ ರಸ್ತೆಯನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಸದರಿ ರಸ್ತೆಯ ಬಲಭಾಗದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲುಸೇತುವೆಯ ಟೌನ್ ಹಾಲ್ ದಿಕ್ಕಿನ ಇಳಿಜಾರು(Down Ramp) ನ ಎಸ್.ಜೆ.ಪಿ ರಸ್ತೆಯ ಜಂಕ್ಷನ್ ನಲ್ಲಿ ವೈಟ್‌ಟಾಪಿಂಗ್ ಮತ್ತು ಅಡ್ಡಮೋರಿಯನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಅನುಮತಿ ಪಡೆದು ನಾಳೆಯಿಂದ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ಕಾಮಗಾರಿ ನಡೆಯುವ ವೇಳೆ ಸಂಚಾರ ದಟ್ಟಣೆ ತಡೆಯುವ ಉದ್ದೇಶದಿಂದ ಗೂಡ್ ಶೆಡ್ ರಸ್ತೆಯನ್ನು ನಾಳೆಯಿಂದ ವಾಹನಗಳ ಸಂಚಾರಕ್ಕೆ ಹಾಗೂ ಕೆ.ಆರ್ ಮಾರುಕಟ್ಟೆ ಮೇಲು ಸೇತುವೆ ರಸ್ತೆಯ ಮೂಲಕ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ.

ಮುಂದುವರೆದು, ಹಾಲಿ ನಗರದ ಗೂಡ್ ಶೆಡ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಿರ್ವಹಿಸುವ ಸಂಬಂಧ ದಿನಾಂಕ: 05.08.2021 ರಿಂದ ಗೂಡ್ ಶೆಡ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿ ಎಲ್ಲಾ ವಾಹನಗಳನ್ನು ಮೇಲುಸೇತುವೆಯ ಮುಖಾಂತರ ಮಾರುಕಟ್ಟೆ ಮತ್ತು ಟೌನ್‌ಹಾಲ್ ಕಡೆಗೆ ಸಂಚಾರ ಬದಲಾವಣೆ ಮಾಡಲಾಗಿರುತ್ತದೆ. ಈ ಮಧ್ಯೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲುಸೇತುವೆಯ ಟೌನ್ ಹಾಲ್ ದಿಕ್ಕಿನ ಇಳಿಜಾರು(Down Ramp) ಜಂಕ್ಷನ್ ಹತ್ತಿರ ಮಳೆಯಾದಂತಹ ಸಂದರ್ಭದಲ್ಲಿ ಉಂಟಾಗುವ ನೀರು ನಿಲ್ಲುವ(ವಾಟರ್ ಲಾಗಿಂಗ್) ಸಮಸ್ಯೆಯನ್ನು ನಿವಾರಿಸುವ ಸಂಬಂಧ, ಶೀಘ್ರವಾಗಿ ಈ ರಸ್ತೆ ಭಾಗದಲ್ಲಿ ವೈಟ್‌ಟಾಪಿಂಗ್ ಮತ್ತು ಅಡ್ಡಮೋರಿಯನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿರುತ್ತದೆ.
ಅದರಂತೆ ದಿನಾಂಕ: 06.08.2021 ರಂದು ಮಾನ್ಯ ಜಂಟಿ ಪೊಲೀಸ್ ಆಯುಕ್ತರು(ಸಂಚಾರ) ರವರೊಂದಿಗೆ ಮುಖ್ಯ ಇಂಜಿನಿಯರ್(ಯೋಜನೆ ಕೇಂದ್ರ) ರವರು ಚರ್ಚಿಸಲಾಗಿದ್ದು, ಆದ್ಯತೆ ಮೇರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲುಸೇತುವೆ ಟೌನ್ ಹಾಲ್ ದಿಕ್ಕಿನ ಇಳಿಜಾರು(Down Ramp) ನಿಂದ ಎಸ್.ಜೆ.ಪಿ ರಸ್ತೆಯ ಜಂಕ್ಷನ್ ನಲ್ಲಿ ವೈಟ್‌ಟಾಪಿಂಗ್ ಮತ್ತು ಅಡ್ಡಮೋರಿಯನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡು 15 ದಿವಸದೊಳಗೆ ಪೂರ್ಣಗೊಳಿಸಲು ಒಪ್ಪಿಸಲಾಗಿರುತ್ತದೆ.

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲುಸೇತುವೆ ಟೌನ್ ಹಾಲ್ ದಿಕ್ಕಿನ ಇಳಿಜಾರಿನಿಂದ ಎಸ್.ಜೆ.ಪಿ ರಸ್ತೆವರೆಗೆ ವೈಟ್‌ಟಾಪಿಂಗ್ ಕಾಮಗಾರಿ ಪೂರ್ಣಗೊಂಡ ನಂತರ ಗೂಡ್ ಶೆಡ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಅಳವಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದೆಂದು ಸಾರ್ವಜನಿಕರ ಗಮನಕ್ಕೆ ಈ ಮೂಲಕ ತಿಳಿಸಲಾಗಿದೆ. ಹಾಗೂ ಕಾಮಗಾರಿ ನಿರ್ವಹಿಸುವ ಸಮಯದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲವನ್ನು ತಪ್ಪಿಸಲು ವೈಟ್ ಟಾಪಿಂಗ್ ಕಾಮಗಾರಿಯು ಪೂರ್ಣಗೊಳ್ಳುವ ವರವಿಗೂ ಸದರಿ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬಹುದಾಗಿರುತ್ತದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

Leave a Reply

Your email address will not be published.

error

ನಮ್ಮ ಜತೆಗೆ ಕೈ ಜೋಡಿಸಲು Subscribe ಮಾಡಿ